ಕೊಠಡಿ ಬಾಗಿಲು ಹಾಕಿಕೊಂಡು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Prasthutha: July 15, 2021

ಬೆಳ್ತಂಗಡಿ: ಪದವಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಜಿರೆಯಲ್ಲಿ ನಡೆದಿದೆ.

ಕೊಕ್ರಾಡಿ ಗ್ರಾಮದ ಜಂತುಗೋಳಿ ಬಳಿಯ ರತ್ನಾಕರ ಮತ್ತು ರತ್ನಾ ದಂಪತಿಯ ಪುತ್ರ ರಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಉಜಿರೆಯ ಖಾಸಗಿ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಆನ್ ಲೈನ್ ಕ್ಲಾಸ್ ಎಂದು ಮನೆಯ ಕೊಠಡಿಯೊಳಗೆ ಬಾಗಿಲು ಹಾಕಿ ಕುಳಿತುಕೊಂಡಿದ್ದ ಎನ್ನಲಾಗಿದೆ.

ಮಧ್ಯಾಹ್ನ ಊಟಕ್ಕೆಂದು ತಾಯಿ ಆತನ ಕೊಠಡಿಯ ಬಾಗಿಲು ಬಡಿದಿದ್ದಾರೆ, ಎಷ್ಟು ಹೊತ್ತಾದರೂ ಬಾಗಿಲು ತೆರೆದಿರಲಿಲ್ಲ. ಬಳಿಕ ಫೋನ್ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿರುವುದು ಕಂಡುಬಂತು. ನಂತರ ಕಿಟಕಿ ತೆಗೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಕ್ಷಿತ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆನ್ ಲೈನ್ ಕ್ಲಾಸ್ ಎಂದು ಬಾಗಿಲು ಹಾಕಿಕೊಂಡಿದ್ದ ವಿದ್ಯಾರ್ಥಿ ಯಾಕೆ ಈ ರೀತಿ ನಿರ್ಧಾರ ತೆಗೆದುಕೊಂಡ ಎನ್ನುವುದು ತನಿಖೆಯಿಂದ ತಿಳಿಯಬೇಕಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ