ವಿದ್ಯಾರ್ಥಿನಿ ಹತ್ಯೆ ಪ್ರಕರಣ| ವಿ.ವಿ ಆಡಳಿತ ಮಂಡಳಿ ವಿರುದ್ಧ FIR

Prasthutha|

ಬೆಂಗಳೂರು: ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಬಿ.ಟೆಕ್ ವಿದ್ಯಾರ್ಥಿನಿ ಲಯಸ್ಮಿತಾ (19) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿ ವಿರುದ್ಧವೂ FIR ದಾಖಲಾಗಿದೆ.

- Advertisement -

ರಾಜಾನುಕುಂಟೆ ದಿಬ್ಬೂರು ಬಳಿಯ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ 19 ವರ್ಷದ ವಿದ್ಯಾರ್ಥಿನಿ ಲಯಸ್ಮಿತಾ ಅವರನ್ನು ನೃಪತುಂಗ ವಿಶ್ವವಿದ್ಯಾಲಯದಲ್ಲಿ ಬಿಸಿಎ ಓದುತ್ತಿದ್ದ 23 ವರ್ಷದ ಪವನ್ ಕಲ್ಯಾನ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೋಮವಾರ ಹತ್ಯೆಗೈದಿದ್ದ. ಮಾತ್ರವಲ್ಲದೆ ತಾನು ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು.

‘ಬೇರೆ ಕಾಲೇಜಿನ ವಿದ್ಯಾರ್ಥಿಯನ್ನು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದವರು ಒಳಗೆ ಬಿಟ್ಟಿದ್ದಾರೆ. ಪ್ರಕರಣದಲ್ಲಿ ವಿಶ್ವವಿದ್ಯಾಲಯದವರ ನಿರ್ಲಕ್ಷ್ಯವೂ ಎದ್ದು ಕಾಣುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯವರನ್ನೂ ಕೂಡ ಆರೋಪಿಯನ್ನಾಗಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp