ವಿದ್ಯಾರ್ಥಿನಿಯ ಮೇಲೆ ಪ್ರಾಂಶುಪಾಲನಿಂದ ಅತ್ಯಾಚಾರ !

Prasthutha|

ಬೆಂಗಳೂರು: ಖಾಸಗಿ ಶಾಲೆಯ ಪ್ರಾಂಶುಪಾಲನೊಬ್ಬ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.

- Advertisement -


ವರ್ತೂರು ಸಮೀಪದ ಶಾಲೆಗೆ ಬಾಲಕಿ ಎಂದಿನಂತೆ ತೆರಳಿ ಮನೆಗೆ ವಾಪಸ್ ಆಗಿದ್ದಳು. ಮನೆಗೆ ಮರಳಿದ ವೇಳೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ವಿಪರೀತ ನೋವಿನಿಂದ ಬಳಲಿದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಡಿಸಿದ್ದಾರೆ ಎಂದು ಪೋಷಕರು ಹೇಳಿದ್ದಾರೆ.


ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನೇ ಆಕೆಯನ್ನು ಖಾಲಿ ರೂಮಿಗೆ ಕರೆದೊಯ್ದು ಕೃತ್ಯ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಸಂಬಂಧ ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.



Join Whatsapp