ಕಾಲೇಜು ಮಹಡಿಯಿಂದ ಜಿಗಿದು ಇಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ

Prasthutha: March 1, 2021

ಬೆಂಗಳೂರು: ಇಂಜಿನಿಯರಿಂಗ್​ ವಿದ್ಯಾರ್ಥಿಯೊಬ್ಬ ಕಾಲೇಜಿನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ.

ಜಯಂತ್ ರೆಡ್ಡಿ ಮೃತ ವಿಧ್ಯಾರ್ಥಿಯಾಗಿದ್ದಾನೆ. ವಿವಿ ಪುರಂನಲ್ಲಿರುವ ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ವಿದ್ಯಾರ್ಥಿ ಸಾವಿನ ಹಿಂದೆ ಅನುಮಾನಗಳು ಮೂಡಿದೆ.

ಸ್ಥಳಕ್ಕೆ ಭೇಟಿ ನೀಡಿದ ವಿವಿ ಪುರಂ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿಯ ಶವವನ್ನು ಕಿಮ್ಸ್​ ಆಸ್ಪತ್ರೆಗೆ ಸಾಗಿಸಿದ್ದಾರೆ.

ಮೃತ ವಿಧ್ಯಾರ್ಥಿ ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಮೂರನೇ ಸೆಮಿಸ್ಟರ್​ ಓದುತ್ತಿದ್ದ. ಇಂದು ಇಯರ್ ಬ್ಯಾಕ್ ಆಗಿದ್ದ ಪರೀಕ್ಷೆ ಬರೆಯಲು ಬಂದಿದ್ದ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಾಲೇಜಿನ ಶುಲ್ಕದ ವಿಚಾರಕ್ಕೆ ಬೇಸರವಾಗಿರಬಹುದೇ? ಪರೀಕ್ಷೆ ಬರೆಯುವ ವಿಚಾರಕ್ಕೆ ಟೆನ್ಷನ್ ಆಗಿತ್ತೇ? ಎಂಬ ಅನುಮಾನ ಮೂಡಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!