Home ಟಾಪ್ ಸುದ್ದಿಗಳು ಕಾಲೇಜಿನಲ್ಲಿ ಕನ್ನಡ ಬಾವುಟ ಹಿಡಿದು ಕುಣಿಯುತ್ತಿದ್ದ ವಿದ್ಯಾರ್ಥಿಗೆ ಥಳಿತ: ಕರವೇ ಪ್ರತಿಭಟನೆ

ಕಾಲೇಜಿನಲ್ಲಿ ಕನ್ನಡ ಬಾವುಟ ಹಿಡಿದು ಕುಣಿಯುತ್ತಿದ್ದ ವಿದ್ಯಾರ್ಥಿಗೆ ಥಳಿತ: ಕರವೇ ಪ್ರತಿಭಟನೆ

ಬೆಳಗಾವಿ: ಇಲ್ಲಿನ ಪಿಯು ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ಕುಣಿಯುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಮಹಾರಾಷ್ಟ್ರ ಬೆಂಬಲಿಸುವ ಸಹಪಾಠಿಗಳು ಥಳಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಕರವೇ ಪ್ರತಿಭಟನೆ ನಡೆಸಿದೆ.


ಈ ಘಟನೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ-ಗೋವಾ ಮುಖ್ಯ ರಸ್ತೆಯನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬೆಳಗಾವಿಯ ಗೋಗ್ಟೆ ಕಾಲೇಜಿನ ಫೆಸ್ಟ್ ನಡೆಯುತ್ತಿರುವಾಗ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಕನ್ನಡ ಬಾವುಟ ಹಿಡಿದು ಸಂಭ್ರಮಿಸಿದ್ದಾರೆ. ಇದನ್ನು ಸಹಿಸದ ಮಹಾರಾಷ್ಟ್ರ ಬೆಂಬಲಿಸುವ ವಿದ್ಯಾರ್ಥಿಗಳು ಥಳಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.

Join Whatsapp
Exit mobile version