Home ಕರಾವಳಿ ಮಂಗಳೂರು | ಸಾಂಬಾರು ಎಸೆದ ವಿಚಾರಕ್ಕೆ ಹೊಡೆದಾಟ: ಸಹಪಾಠಿಯ ಎದೆಗೆ ಚೂರಿ ಎಸೆದ ವಿದ್ಯಾರ್ಥಿ

ಮಂಗಳೂರು | ಸಾಂಬಾರು ಎಸೆದ ವಿಚಾರಕ್ಕೆ ಹೊಡೆದಾಟ: ಸಹಪಾಠಿಯ ಎದೆಗೆ ಚೂರಿ ಎಸೆದ ವಿದ್ಯಾರ್ಥಿ

ಮಂಗಳೂರು: ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಬಟ್ಟೆಗೆ ಸಾಂಬಾರು ಚೆಲ್ಲಿದ ವಿಚಾರಕ್ಕೆ ಜಗಳವಾಗಿ ಒಬ್ಬ ವಿದ್ಯಾರ್ಥಿ ತನ್ನ ಸಹಪಾಠಿಗೆ ಚೂರಿ ಎಸೆದು ಗಾಯಗೊಳಿಸಿದ ಘಟನೆ ಬುಧವಾರ ನಡೆದಿದೆ.


ಮಧ್ಯಾಹ್ನ ಊಟದ ಹೊತ್ತಿನಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿ ಅಲ್ಲಿಂದ ಮುಂದೆ ಹೋಗುತ್ತಿರುವಾಗ ಪೆಟ್ಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಚೂರಿ ತೆಗೆದು ಆತನ ಮೇಲೆ ನೇರವಾಗಿ ಎಸೆದಿದ್ದಾನೆ. ಅದೃಷ್ಟವಶಾತ್ ಎದೆ ಭಾಗದಿಂದ ಸ್ವಲ್ಪ ಪಕ್ಕದಲ್ಲಿ ಚೂರಿ ತಗುಲಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ವೈಸ್ ಪ್ರಿನ್ಸಿಪಾಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.


ಘಟನೆಯ ಮಾಹಿತಿ ಪಡೆದ ದಕ್ಷಿಣ ಉಪ ವಿಭಾಗ ಎಸಿಪಿ, ಕೊಣಾಜೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸೇರಿದಂತೆ ಅಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಭೇಟಿ ನೀಡಿ ಹುಡುಗನಿಗೆ ಬುದ್ಧಿ ಹೇಳಿ ಮನೆಗೆ ಕಳುಹಿಸಿದ್ದು ಇಂದು ತನಿಖೆ ಮುಂದುವರಿಸಿದ್ದಾರೆ.

Join Whatsapp
Exit mobile version