ಉಳ್ಳಾಲ ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ | ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ ವಿದ್ಯಾರ್ಥಿಗಳು

Prasthutha|

ಬೆಂಗಳೂರು : ಶಿಕ್ಷಣದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುಗುತ್ತಿದ್ದ ವೇಳೆ ಗಾಂಜಾ ವ್ಯಸನಿಗಳಿಂದ ಹಲ್ಲೆಗೊಳಗಾಗಿ ನಂತರ ಉಳ್ಳಾಲದ ಪೊಲೀಸರು ವಿದ್ಯಾರ್ಥಿಗಳನ್ನು ಕರೆದೊಯ್ದು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಕುರಿತು ಹಲ್ಲೆಗೊಳಗಾದ ಮೂವರು ವಿದ್ಯಾರ್ಥಿಗಳು ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

   ದೂರು ಸ್ವೀಕರಿಸಿದ ಅಧಿಕಾರಿಗಳು ಪ್ರಕರಣವನ್ನು ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆಂದು ದೂರು ನೀಡಿದ ವಿಧ್ಯಾರ್ಥಿಗಳು ತಿಳಿಸಿದ್ದಾರೆ.

ಶಿಕ್ಷಣದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುತ್ತಿದ್ದ ವೇಳೆ ಗಾಂಜಾ ವ್ಯಸನಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು. ನಂತರ ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಧಾರ್ಮಿಕವಾಗಿ ನಿಂದಿಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು, ಮಾರಣಾಂತಿಕ ಹಲ್ಲೆ ನಡೆಸಿದ್ದರು.

- Advertisement -

ಮನೆಗೆ ಹಿಂದಿರುಗುವ ವೇಳೆ ದಾಳಿಗೊಳಗಾದ ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದು ರಕ್ಷಣೆ ನೀಡಬೇಕಾದ ಆರಕ್ಷಕರು ವಿಧ್ಯಾರ್ಥಿಗಳ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.

Join Whatsapp