ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲು ಆಗ್ರಹ; ಎಐಡಿಎಸ್‌ಒ ಪ್ರತಿಭಟನೆ

Prasthutha|

ಹಾಸನ:  ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಶೈಕ್ಷಣಿಕ ವರ್ಷ ಮುಗಿಯುವವರೆಗೂ ವಿಸ್ತರಿಸುವಂತೆ ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ಪ್ರತಿಭಟನೆಯನ್ನುದ್ದೇಶಿಸಿ  ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಸುಭಾಷ್, ವಿದ್ಯಾರ್ಥಿ ಬಸ್‌ಪಾಸ್‌ಗೆ ಅವರ ಶೈಕ್ಷಣಿಕ ವರ್ಷದ ಕೊನೆಯವರೆಗೂ ಮಾನ್ಯತೆ ಇರುತ್ತದೆ. ಇದು ಇಷ್ಟು ವರ್ಷಗಳವರೆಗೂ ನಡೆದುಕೊಂಡು ಬಂದಿರುವ ಪ್ರಕ್ರಿಯೆ. ಹಲವು ವರ್ಷಗಳ ಹೋರಾಟದ ಫಲವಾಗಿ ವಿದ್ಯಾರ್ಥಿಗಳು ರಿಯಾಯಿತಿ ಪಾಸ್ ಅನ್ನು ಪಡೆದುಕೊಂಡಿದ್ದಾರೆ. ವಾಸ್ತವವಾಗಿ, ನಮ್ಮ ಹೋರಾಟ ಉಚಿತ ಪಾಸ್ ನೀಡಬೇಕು ಎಂಬುದಾಗಿದೆ. ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಏಕಾಏಕಿ ವಿದ್ಯಾರ್ಥಿ ಬಸ್ ಪಾಸ್‌ನ ಅವಧಿಯು ಜೂನ್ ತಿಂಗಳಿಗೆ ಕೊನೆಗೊಳಿಸಿರುವುದರಿಂದ, ಶೈಕ್ಷಣಿಕ ವರ್ಷದ ಅವಧಿ ಮುಗಿಯುವ ಮುನ್ನವೇ ಮಾನ್ಯತೆ ರದ್ದಾಗಿದೆ.  ಮುಂದಿನ ತಿಂಗಳಿನಿಂದ ಹಣ ಪಾವತಿಸಿ ಓಡಾಡಬೇಕು ಎಂದು ನಿಗಮ ಹೇಳಿದೆ. ಹೀಗಿರುವಾಗ, ದುಡ್ಡು ಕೊಟ್ಟು ಓಡಾಡಬೇಕು ಎಂಬುವುದು ವಿದ್ಯಾರ್ಥಿ ವಿರೋಧಿ ನಿರ್ಧಾರ. ನಿಗಮದ ಈ ನಿರ್ಧಾರವನ್ನು ಎಐಡಿಎಸ್‌ಒ ಜಿಲ್ಲಾ ಸಮಿತಿ ಖಂಡಿಸುತ್ತದೆ ಎಂದು‌ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಯು ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ಆಗಸ್ಟ್ ವರೆಗೆ ವಿಸ್ತರಣೆ ಮಾಡಿದೆ. ಇದನ್ನೇ ಇತರ ಸಾರಿಗೆ ಸಂಸ್ಥೆಗಳು ಅನುಸರಿಸಬೇಕು. ರಾಜ್ಯ ಸಾರಿಗೆ ನಿಗಮವೂ ವಿದ್ಯಾರ್ಥಿಗಳಿಗೆ ಪ್ರಯಾಣ ಮಾಡಲು ಅನುಕೂಲವಾಗುವಂತೆ ಪಾಸ್ ಅವಧಿ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದರು.

- Advertisement -

ಎಐಡಿಎಸ್‌ ಜಿಲ್ಲಾ ಸಹ ಸಂಚಾಲಕಿ ಚೈತ್ರಾ ಪದಾಧಿಕಾರಿಗಳಾದ ಗಾಯತ್ರಿ, ಸುಷ್ಮಾ, ವಿದ್ಯಾರ್ಥಿಗಳಾದ ಅಂಜಲಿ, ಮದನ್, ಸಂಜಯ್, ಅಮರ್ಜಿತ್, ಕಿರಣ್, ಗುರುದೇವ, ಮನು, ಪ್ರೀತಮ್, ದರ್ಶನ್, ಅಭಿ ಪಾಲ್ಗೊಂಡಿದ್ದರು.

Join Whatsapp