ನವದೆಹಲಿ: ಮುಸ್ಲಿಮ್ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಘಪರಿವಾರದ ಬಜರಂಗ್ ಮುನಿ ಎಂಬಾತನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಶನಿವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಫೆಟರ್ನಿಟಿ ಫೋರಂ, ಐಸಾ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಬಜರಂಗ್ ಮುನಿಯನ್ನು ಬಂಧಿಸುವಂತೆ ಒತ್ತಾಯಿಸಿ ಯುಪಿ ಭವನ ಮುಂಭಾಗ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸಿ ವಾಹನದಲ್ಲಿ ಮಂದರಿ ಮಾರ್ಗ್ ಪೊಲೀಸ್ ಠಾಣೆಗೆ ಕರೆದೊಯ್ದು ಬಳಿಕ ಬಿಡುಗಡೆ ಮಾಡಿದರು.
ಉತ್ತರ ಪ್ರದೇಶದ ಸ್ವಾಮಿ ಭಜರಂಗ್ ದಾಸ್ ಮುನಿ ಇತ್ತೀಚೆಗೆ ಬಹಿರಂಗವಾಗಿ ಮುಸ್ಲಿಮ್ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ.