ಅಡ್ಯಾರು ಗ್ರಾಮ ಪಂಚಾಯತ್’ನಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Prasthutha|

ಮಂಗಳೂರು ತಾಲೂಕು ಅಡ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 2023-24 ನೇ ಸಾಲಿನಲ್ಲಿ SSLC ಮತ್ತು PUC ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು SSLC ಮತ್ತು PUC ನಂತರ ಏನು ? ಎನ್ನುವ ವಿಷಯದ ಬಗ್ಗೆ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

- Advertisement -

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ರಫೀಕ್ ಮಾಸ್ಟರ್ ರವರು ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ವಿಶೇಷ ಆಹ್ವಾನಿತರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಈಶ್ವರ್. ಕಂಪ ಸಂದಾನಂದ ಆಳ್ವ. ಅಬ್ದುಲ್ ಖಾದರ್ ದಾರಿಮಿ. ಶ್ರೀಮತಿ ಪ್ಲೋರಿನ್ ಡಿಸೋಜ. ಮತ್ತು ಅಡ್ಯಾರು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಸದ್ರಿ ಕಾರ್ಯಕ್ರಮವನ್ನು ಗ್ರಾಮ ಅಡ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಅಬ್ದುಲ್ ಜಲೀಲ್ ರವರು ಸ್ವಾಗತಿಸಿದರು. ಪಿಡಿಒ ಕೃಷ್ಣನಾಯ್ಕ್ ಹೆಚ್. ರವರು ವಂದಿಸಿದರು.


ಈ ಸಂದರ್ಭದಲ್ಲಿ ಅಡ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Join Whatsapp