ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು

Prasthutha|

►ಕರ್ನಾಟಕ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸೇವಾ ಟ್ರಸ್ಟ್ ಉದ್ಘಾಟನೆ

- Advertisement -

ಬೆಂಗಳೂರು: ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವುದನ್ನು ತಡೆಯಲು ಶಾಲೆಗಳು ಮತ್ತು ಪಾಲಕರು ನೈತಿಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ “ಕರ್ನಾಟಕ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸೇವಾ ಟ್ರಸ್ಟ್ “ ಉದ್ಘಾಟನೆ, ಲಾಂಚನ ಬಿಡುಗಡೆ ಹಾಗೂ ಅಂಧರಿಗೆ ಕೈಗಡಿಯಾರ ಮತ್ತು ವಾಕಿಂಗ್ ಸ್ಟಿಕ್ ವಿತರಿಸಿದರು. ಪೋಷಕ ಕಲಾವಿದರಿಗೆ “ಪೋಷಕ ಕಲಾ ಸೇವಾ ರತ್ನ” ಮತ್ತು ಮಹಿಳಾ ಪತ್ರಕರ್ತೆಯರಿಗೆ “ಮಹಿಳಾ ಮಾಧ್ಯಮ ಸೇವಾ ರತ್ನ” ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಇತ್ತೀಚೆಗೆ ನಡೆಸಿದ ಅಧ್ಯಯನ ಮತ್ತು ಶಾಲೆಗಳ ತಪಾಸಣೆ ಸಂದರ್ಭದಲ್ಲಿ 8ನೇ ತರಗತಿ ಹಂತದಿಂದಲೇ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯಿಂದ ದೂರ ಉಳಿದು ಪ್ರೀತಿ, ಪ್ರೇಮದ ಬಲೆಗೆ ಬಿದ್ದಿರುವ ಬಗ್ಗೆ ಮಾಹಿತಿ ಲಭಿಸಿದೆ. ಹೀಗಾಗಿ ಶಾಲೆಗಳಲ್ಲಿ ಪ್ರತಿನಿತ್ಯ ನೈತಿಕ ಶಿಕ್ಷಣ ನೀಡಬೇಕು ಎಂದು ಪತ್ರ ಬರೆಯಲಾಗಿದೆ ಎಂದರು.

- Advertisement -

ಪಾಲಕರು ಸಹ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದಷ್ಟೇ ತಮ್ಮ ಕರ್ವವ್ಯವಲ್ಲ. ನೈತಿಕ ಶಿಕ್ಷಣವನ್ನು ಮನೆಗಳಲ್ಲೂ ಬೋಧಿವುದನ್ನು ತಮ್ಮ ಜವಾಬ್ದಾರಿಯನ್ನಾಗಿ ಮಾಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಪಡೆದು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಹೀಗಾಗಿ ಪಾಲಕರು ತಮ್ಮ ಕರ್ತವ್ಯದ ಜೊತೆಗೆ ಜವಾಬ್ದಾರಿಯನ್ನು ಸಹ ಸಮರ್ಥವಾಗಿ ನಿಭಾಯಿಸಬೇಕು ಎಂದು ಹೇಳಿದರು.

ವಿಶೇಷವಾಗಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಸಹ ಜೀವನ ಪದ್ಧತಿಯಿಂದ ವಿದ್ಯಾರ್ಥಿನೀಯರ ಪ್ರಗತಿಗೆ ಅಡ್ಡಿಯಾಗುತ್ತಿದೆ. ಆಸೆ, ಆಮೀಷಗಳನ್ನು ಒಡ್ಡಿ ದಾರಿ ತಪ್ಪಿಸುವುದನ್ನು ತಪ್ಪಿಸಲು ಸೂಕ್ತ ಮಾರ್ಗದರ್ಶನ ಅಗತ್ಯ ಎಂದು ಹೇಳಿದರು.

ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್, ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ, ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯೆ, ಕಿರುತೆರೆ ನಟಿ ಕೆ. ಕಮಲ ಮತ್ತು “ಕರ್ನಾಟಕ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸೇವಾ ಟ್ರಸ್ಟ್ “ ಅಧ್ಯಕ್ಷರಾದ ಶುಭ ಮಹದೇವ್ ಮತ್ತಿತರರು ಉಪಸ್ಥಿತರಿದ್ದರು.

Join Whatsapp