ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಪಾಸ್ | ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

Prasthutha|

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಜನತೆ ಕಂಗಾಲಾಗಿದ್ದಾರೆ. ಕೊರೋನಾ ಸೋಂಕಿನ ತೀವ್ರತೆಯನ್ನು ತಡೆಯುವ ಸಲುವಾಗಿ ರಾಜ್ಯಾದ್ಯಂತ ಲಾಕ್ ಡೌನ್ ಅನ್ನು ಜಾರಿಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ತೇರ್ಗಡೆಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

- Advertisement -


ಅದೇ ರೀತಿ ಮೇ 24ರಂದು ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದ್ದು , ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

Join Whatsapp