ಮಡಿಕೇರಿ: ಕೋವಿಡ್-19 ವೈರಸ್ ಹಾಗೂ ಲಸಿಕೆ ಬಗ್ಗೆ ಕಾಲೇಜು ವಿದ್ಯಾರ್ಥಿಗಳು ಮಡಿಕೇರಿ ನಗರದಲ್ಲಿ ಜಾಗೃತಿ ಮೂಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೆಫ್ ಮತ್ತು ಐಐಎಚ್ಎಂಆರ್, ಬೆಂಗಳೂರು ಹಾಗೂ ಜನರಲ್ ಕಾರ್ಯಪ್ಪ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋವಿಡ್ –19 ವೈರಸ್, ಮಾಸ್ಕ್ ಮತ್ತು ಲಸಿಕೆಯ ವೇಷಭೂಷಣಗಳನ್ನು ಧರಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಜಾಥಾವನ್ನು ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಆನಂದ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಮತ್ತು ತಾಲ್ಲೂಕು ಆರೋಗ್ಯಧಿಕಾರಿ ಡಾ.ಚೇತನ್, ಜಿಲ್ಲಾ ಸಂಯೋಜಕರಾದ ಡಾ.ಬಿ.ರವೀಶ್ ಸಾಥ್ ನೀಡಿದರು. ಇನ್ನೂ ಜನರಲ್ ಕಾರ್ಯಪ್ಪ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಪೋಲಿಸ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.