Home ಟಾಪ್ ಸುದ್ದಿಗಳು ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಭಾರತದಲ್ಲಿ ಅರ್ಹತಾ ಪರೀಕ್ಷೆಯಲ್ಲಿ ವಿಫಲರಾದವರು ಎಂದ ಪ್ರಹ್ಲಾದ್ ಜೋಷಿ

ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಭಾರತದಲ್ಲಿ ಅರ್ಹತಾ ಪರೀಕ್ಷೆಯಲ್ಲಿ ವಿಫಲರಾದವರು ಎಂದ ಪ್ರಹ್ಲಾದ್ ಜೋಷಿ

ಹೊಸದಿಲ್ಲಿ: ಭಾರತೀಯ ವಿದ್ಯಾರ್ಥಿಗಳು ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ತೆರಳುವ ಶೇ 90ರಷ್ಟು ಭಾರತೀಯರು ತಮ್ಮ ದೇಶದಲ್ಲಿ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ವಿಫಲರಾಗಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ನಿಯಮಗಳ ಪ್ರಕಾರ ವಿದೇಶಗಳಲ್ಲಿ ಎಂಬಿಬಿಎಸ್ ಪದವಿ ಶಿಕ್ಷಣಕ್ಕೆ ತೆರಳುವವರು ವಿದೇಶಿ ವೈದ್ಯಕೀಯ ಪದವೀಧರರ ಪರೀಕ್ಷೆ ತೇರ್ಗಡೆಯಾಗಬೇಕಿದೆ.ಉಕ್ರೇನ್‍ನಲ್ಲಿ ಸಿಲುಕಿರುವ ಭಾರತದ ವಿದ್ಯಾರ್ಥಿಗಳನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅಲ್ಲಿನ ಭಾರತೀಯ ದೂತಾವಾಸದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಉಕ್ರೇನ್ ವಿಚಾರದಲ್ಲಿ ಮತದಾದನಗೈಯ್ಯುವುದರಿಂದ ದೂರವುಳಿದ ಭಾರತದ ಕ್ರಮದ ನಂತರ ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಗುರಿ ಮಾಡಲಾಗುತ್ತಿದೆ ಎಂಬ ವದಂತಿಗಳ ಕುರಿತು ಪ್ರತಿಕ್ರಿಯಿಸಿದ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಹರಿದಾಡುತ್ತಿರುವ ವೀಡಿಯೊಗಳ ಸತ್ಯಾಸತ್ಯತೆ ಇನ್ನಷ್ಟೇ ತಿಳಿದು ಬರಬೇಕಿದೆ ಎಂದರು.

Join Whatsapp
Exit mobile version