Home ಕರಾವಳಿ ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದಕ್ಕೆ ಪರೀಕ್ಷೆ ನಿರಾಕರಣೆ: ಮನೆಗೆ ವಾಪಸಾದ ವಿದ್ಯಾರ್ಥಿನಿಯರು

ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದಕ್ಕೆ ಪರೀಕ್ಷೆ ನಿರಾಕರಣೆ: ಮನೆಗೆ ವಾಪಸಾದ ವಿದ್ಯಾರ್ಥಿನಿಯರು

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿಕ್ಕೆ ಪರೀಕ್ಷೆ ಬರೆಯಲು ಅನುಮತಿ ನೀಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯರು ಮನೆಗೆ ತೆರಳಿದ ಘಟನೆ ಶುಕ್ರವಾರ ನಡೆದಿದೆ.

ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಆದರೆ ಕಾಲೇಜು ಸಿಬ್ಬಂದಿ ತರಗತಿ ಪ್ರವೇಶಕ್ಕೆ ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿಗಳು ಹೊರಗೆ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಮನೆಗೆ ವಾಪಸ್ ತೆರಳಿದ್ದಾರೆ.

Join Whatsapp
Exit mobile version