ಶಿಕ್ಷಣದ ಮೂಲಕ ಸೌಹಾರ್ದತೆ ಮೂಡಿಸಲು ವಿದ್ಯಾರ್ಥಿಗಳು ಮುಂದಾಗಬೇಕು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Prasthutha: May 14, 2022

ಬೆಂಗಳೂರು: ಸೌಹಾರ್ದತೆ ಭಾರತೀಯ ಪುರಾತನ ಸಂಸ್ಕೃತಿಯಾಗಿದ್ದು, ಶಿಕ್ಷಣದ ಮೂಲಕ ಜನರನ್ನು ಒಗ್ಗೂಡಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ. ಸೆಂಟ್ ಜೋಸೆಫ್ ಇನ್ಸ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನ 25 ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಿ, ಪಿಜಿಡಿಎಂ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ಎಲ್ಲಾ ಪದವೀಧರರಿಗೆ ಅಭಿನಂದನೆ ಸಲ್ಲಿಸಿದರು ಮತ್ತು ಇವರ ಮುಂದಿನ ಪ್ರಯತ್ನಗಳು ಯಶಸ್ವಿಯಾಗಲಿ ಎಂದು ಹಾರೈಸಿದರು.


ಬಳಿಕ ಮಾತನಾಡಿದ ರಾಜ್ಯಪಾಲರು, ವಿದ್ಯಾರ್ಥಿ ಜೀವನದಲ್ಲಿ ಪಡೆದ ಶಿಕ್ಷಣ ಎಲ್ಲಾ ವಲಯಗಳಿಗೂ ಅನುಕೂಲವಾಗಬೇಕು. ಆಧುನಿಕ ಜೀವನದಲ್ಲಿ ಶಿಕ್ಷಣ ಸರ್ವವ್ಯಾಪಿ, ಸರ್ವ ಸ್ಪರ್ಶಿಯಾಗಬೇಕು. ಪ್ರಾಚೀನ ಸಂಸ್ಕೃತಿಯ ರಕ್ಷಣೆಗೆ ಶಿಕ್ಷಣ ಸೇತುವೆಯಾಗಬೇಕು ಎಂದರು.


ಭಾರತ ಯುವ ಸಮೂಹವನ್ನೊಳಗೊಂಡ ರಾಷ್ಟ್ರವಾಗಿದ್ದು, ಇಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಯುವ ಶಕ್ತಿ ಪರಿಸರದ ಒಂದು ಭಾಗವಾಗಬೇಕು. ತಾಪಮಾನ ಏರಿಕೆ ಜಾಗತಿಕ ಸಮಸ್ಯೆಯಾಗಿದ್ದು, ಗಿಡಗಳನ್ನು ನೆಟ್ಟು ತಂಪು ವಾತಾವರಣ ನಿರ್ಮಾಣ ಮಾಡಲು ಗಮನಹರಿಸಬೇಕು. ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಸ್ವಾವಲಂಬಿ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬರು ಟೊಂಕಕಟ್ಟಿ ನಿಲ್ಲಬೇಕು ಎಂದು ಹೇಳಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!