ಬಸ್ ಸಮಸ್ಯೆ ಖಂಡಿಸಿ ರಸ್ತೆಯಲ್ಲೇ ಕುಳಿತು ಓದುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

Prasthutha: June 24, 2022

ಕೊಪ್ಪಳ: ಸರಿಯಾಗಿ ಬಸ್ ಬರುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳೇ ಬಸ್ಸನ್ನು ತಡೆದು ನಿಲ್ಲಿಸಿ, ರಸ್ತೆಯಲ್ಲೇ ಕುಳಿತು ಓದುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಾದಿಮನಾಳ ಕ್ರಾಸ್ ಬಳಿ ನಡೆದಿದೆ.
ಕೊನಾಪೂರ ಹಾಗೂ ಪರಮನಟ್ಟಿ ಗ್ರಾಮಗಳಿಗೆ ಬಸ್ಸುಗಳ ಸಂಚಾರ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳೇ ಸ್ವಯಂ ಪ್ರೇರಿತರಾಗಿ ಈ ರೀತಿಯ ಪ್ರತಿಭಟನೆ ನಡೆಸಿ, ಅಧಿಕಾರಿಗಳ ಗಮನ ಸೆಳೆದಿದ್ದಾರೆ. ರಸ್ತೆಯಲ್ಲೇ ಕುಳಿತ ವಿದ್ಯಾರ್ಥಿಗಳು ಸರ್ಕಾರ ಮತ್ತು ಕೆಎಸ್ ಆರ್ ಟಿಸಿ ವಿರುದ್ಧ ಘೋಷಣೆಗಳನ್ನೂ ಕೂಗಿದ್ದಾರೆ.


ವಿದ್ಯಾರ್ಥಿಯೊಬ್ಬಳು ಮಾತನಾಡಿ, ಈ ಮಾರ್ಗದಲ್ಲಿ ಮರಗಳ ಕೊಂಬೆಗಳು ರಸ್ತೆಗೆ ಚಾಚಿಕೊಂಡಿವೆ, ಅದರಿಂದ ಬಸ್ಸಿನ ಗಾಜು ಒಡೆಯುವ ಸಾಧ್ಯತೆ ಇದೆ. ಹಾಗಾಗಿ ನಾವು ಬರುವುದಿಲ್ಲ ಎಂದು ಬಸ್ಸು ಚಾಲಕ ನಿರ್ವಾಹಕರು ಹೇಳುತ್ತಾರೆ. ಪ್ರತಿ ಬಾರಿಯೂ ಸಂಬಂಧಪಟ್ಟವರಿಗೆಲ್ಲ ಸಮಸ್ಯೆ ಬಗೆಹರಿಸಲು ವಿನಂತಿಕೊಳ್ಳಲಾಗಿದೆ. ಆದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಶಾಲೆಗೆ ಪ್ರತಿದಿನ 3 ಕಿ.ಮೀ. ನಡೆದುಕೊಂಡು ಹೋಗಬೇಕು, ಇದರಿಂದಾಗಿ ತಡವಾಗುತ್ತದೆ. ಶಾಲೆಗೆ ಸರಿಯಾದ ಸಮಯಕ್ಕೆ ತಲುಪಲಾಗುತ್ತಿಲ್ಲ. ಶಿಕ್ಷಕರು ಪ್ರತಿನಿತ್ಯ ನಮ್ಮನ್ನ ಬೈಯ್ಯುತ್ತಾರೆ. ಹಾಗಾಗಿ ಈ ಸಲ ಎರಡು ಹೊತ್ತು ಬಸ್ ಬಿಡುವವರೆಗೂ ನಾವು ಪ್ರತಿಭಟಿಸುತ್ತೇವೆ ಎಂದು ಆರೋಪಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ