ಉಡುಪಿ : ಲಾಕ್ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಹಲವು ವಿದ್ಯಾರ್ಥಿಗಳು ಕಾಲೇಜು ಫೀಸು ಪಾವತಿ ಮಾಡಲು ಸಮಯಾವಕಾಶ ನೀಡಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಕಾರ್ಕಳ ಯೂನಿಟ್ ಮತ್ತು ಹೊನ್ನಾಳ ಯೂನಿಟ್ ವತಿಯಿಂದ ಕಾರ್ಕಳ ಕ್ಷೇತ್ರ ಶಿಕ್ಷಣ ಅಧಿಕಾರಿ ಮತ್ತು ಬ್ರಹ್ಮಾವರ ಕ್ಷೇತ್ರ ಶಿಕ್ಷಣ ಅಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಲಾಕ್ಡೌನ್ನಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಪ್ರಾರಂಭಿಸಲಾಗಿದ್ದು, ಆದರೆ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಹಲವಾರು ವಿದ್ಯಾರ್ಥಿಗಳು ಕಾಲೇಜು ಶುಲ್ಕ ಪಾವತಿ ಮಾಡದಿರುವ ಕಾರಣ ಆನ್ಲೈನ್ ತರಗತಿಗೆ ಸೇರಿಸದೆ ವಿದ್ಯಾರ್ಥಿಗಳಿಗೆ ಒತ್ತಡ ಏರುತ್ತಿದೆ. ಇದರಿಂದ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಆತಂಕಕ್ಕೊಳಗಾಗಿದ್ದಾರೆ. ಹಾಗಾಗಿ ಇಲ್ಲಿನ ಆಡಳಿತ ವ್ಯವಸ್ಥೆ ಇದರ ಬಗ್ಗೆ ಗಮನಹರಿಸಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಕಾರ್ಕಳ ಯೂನಿಟ್ ಅಧ್ಯಕ್ಷರಾದ ಇಮ್ರಾನ್ ಮತ್ತು ಸದಸ್ಯರಾದ ವಾಸಿಫ್ ಮತ್ತು ಹೊನ್ನಾಳ ಯೂನಿಟ್ ಅಧ್ಯಕ್ಷರಾದ ನೌಫಾಲ್ ಮತ್ತು ಕಾರ್ಯದರ್ಶಿ ಶಾಝ್ ಉಪಸ್ಥಿತರಿದ್ದರು.