ಮಂಗಳೂರು | ಭಾರೀ ಮಳೆಗೆ ರದ್ದಾಗದ ವಿವಿ ಪರೀಕ್ಷೆ: ನೀರು ತುಂಬಿದ ರಸ್ತೆಯಲ್ಲೇ ನಡೆದು ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು

Prasthutha|

ಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಸಂಕಷ್ಟದಿಂದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಾಗಿರುವ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಂಡು ಬಂದಿದೆ.

- Advertisement -


ಮಂಗಳೂರು ವಿವಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ ಕಾರಣ ಪರೀಕ್ಷೆ ಮುಂದೂಡಿಕೆಯಾಗದ ಹಿನ್ನೆಲೆಯಲ್ಲಿ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬಂದಿದ್ದಾರೆ ಎಂದು ತಿಳಿದು ಬಂದಿದೆ.


ಸಂಪೂರ್ಣ ನೀರು ತುಂಬಿದ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಸಂಚರಿಸಿದ್ದು, ಮೊಣಕಾಲು ಮೇಲೆ ನೀರಿದ್ದರೂ ಒದ್ದೆಯಾಗಿಕೊಂಡೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇನ್ನು ಅಪಾಯಕಾರಿ ರೀತಿಯಲ್ಲಿ ವಿದ್ಯಾರ್ಥಿಗಳು ನೀರಿನಲ್ಲಿ ಒದ್ದೆಯಾಗಿಕೊಂಡೇ ನಡೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ವ್ಯಕ್ತವಾಗಿದೆ.

Join Whatsapp