ಕುಂದಾಪುರ: ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದಕ್ಕೆ , ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಘಟನೆ ಕುಂದಾಪುರದ ಆರ್.ಎನ್.ಶೆಟ್ಟಿ ಪಿಯು ಕಾಲೇಜಿನಲ್ಲಿ ಇಂದು ನಡೆದಿದೆ.
ಇಂದು ಬೆಳಿಗ್ಗೆ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಈ ವೇಳೆ ಪ್ರಾಂಶುಪಾಲರು ಹಾಗೂ ಕಾಲೇಜು ಸಿಬ್ಬಂದಿ ಗೇಟ್ ಬಳಿ ಅವರನ್ನು ತಡೆಹಿಡಿದಿದ್ದು, ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಕೋರ್ಟಿನ ತೀರ್ಪಿಗೆ ಎಲ್ಲರೂ ಕಾದು ಕುಳಿತಿದ್ದಾರೆ.