ಹತ್ತನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷಾ ಶುಲ್ಕ ಕಟ್ಟಬೇಕಿಲ್ಲ; ಆಂಧ್ರ ಸರ್ಕಾರ

Prasthutha|

ವಿಜಯವಾಡ: ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಪೂರಕ ಪರೀಕ್ಷೆಗಳಿಗೆ ಶುಲ್ಕ ಸಂಗ್ರಹಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

- Advertisement -

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ಮುಖ್ಯಮಂತ್ರಿಗಳ ಕಚೇರಿ ಅನುಮೋದನೆ ನೀಡಿದೆ. ಪರೀಕ್ಷಾಂಗ ನಿರ್ದೇಶಕ ಡಿ. ದೇವಾನಂದ ರೆಡ್ಡಿ, ಯಾವುದೇ ವಿದ್ಯಾರ್ಥಿಯಿಂದ ಪರೀಕ್ಷಾ ಶುಲ್ಕವನ್ನು ಸಂಗ್ರಹಿಸಲಾಗುವುದಿಲ್ಲ, ಎಲ್ಲಾ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಗಳನ್ನು ನೀಡಲಾಗುವುದು ಮತ್ತು ಪ್ರಕಟಣೆಗೆ ಮೊದಲು ಪರೀಕ್ಷಾ ಶುಲ್ಕವನ್ನು ಪಾವತಿಸಿದವರಿಗೆ ಹಣವನ್ನು ಹಿಂದಿರುಗಿಸಲಾಗುತ್ತದೆ ಎಂದು  ಮಾಹಿತಿ ನೀಡಿದರು. 

ಪೂರಕ ಪರೀಕ್ಷೆಗಳಿಗೆ ಶುಲ್ಕವನ್ನು ವಿನಾಯಿತಿ ನೀಡುವ ಸರಕಾರದ ನಿರ್ಧಾರಕ್ಕೆ ಪೋಷಕರು ಮತ್ತು ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸದ್ದಾರೆ.

Join Whatsapp