ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದ ವಿದ್ಯಾರ್ಥಿಗಳಿಗೆ ಹೆಚ್ಚಿನ‌ ಅಂಕ

Prasthutha|

ಉ.ಪ್ರದೇಶ: ವಿಶ್ವವಿದ್ಯಾಲಯದ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಎಂದು ಮತ್ತು ಕ್ರಿಕೆಟ್‌ ಆಟಗಾರರ ಹೆಸರುಗಳನ್ನು ಬರೆದಿರುವ ಹಲವಾರು ವಿದ್ಯಾರ್ಥಿಗಳಿಗೆ ಮೌಲ್ಯಮಾಪಕರು ಹೆಚ್ವಿನ ಅಂಕಗಳನ್ನು ನೀಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಜೌನ್‌ಪುರದಲ್ಲಿರುವ ವೀರ್‌ ಬಹದ್ದೂರ್‌ ಸಿಂಗ್‌ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

- Advertisement -

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀರಾಮ್‌’ ಮತ್ತು ಕ್ರಿಕೆಟಿಗರ ಹೆಸರುಗಳನ್ನು ಬರೆದ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿರುವ ಇಬ್ಬರು ಶಿಕ್ಷಕರನ್ನು ವಜಾಗೊಳಿಸಲು ವಿಶ್ವವಿದ್ಯಾಲಯ ಆದೇಶಿಸಿದೆ ಎಂದು ವರದಿಯಾಗಿದೆ.

ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ದಿವ್ಯಾಂಶು ಸಿಂಗ್‌ ಆರ್‌ಟಿಐಗೆ ಸಲ್ಲಿಸಿದ ಅರ್ಜಿಯ ಆಧಾರದ ಮೇರೆಗೆ ಫಾರ್ಮಸಿ ಕೋರ್ಸ್‌ನ ನಾಲ್ವರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮರುಪರಿಶೀಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

- Advertisement -

ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ಅಲ್ಲಲ್ಲಿ ‘ಜೈ ಶ್ರೀರಾಮ್‌’ ಘೋಷಣೆ ಮತ್ತು ಭಾರತೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇವರಿಗೆ ಮೌಲ್ಯಮಾಪಕರು ಶೇ 50ಕ್ಕಿಂತ ಹೆಚ್ಚು ಅಂಕಗಳನ್ನು ನೀಡಿದ್ದಾರೆ. ಪರಿಶೀಲನೆ ಬಳಿಕ ವಿದ್ಯಾರ್ಥಿಗಳಿಗೆ ಶೂನ್ಯ ಅಂಕಗಳನ್ನು ನೀಡಲಾಗಿದೆ. ಪ್ರಕರಣದ ಕುರಿತು ರಾಜಭವನ ತನಿಖೆಗೆ ಆದೇಶಿಸಿದೆ.

Join Whatsapp