ಉಗ್ರರಿಂದ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ಹತ್ಯೆ : ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಸಾವು

Prasthutha|

ಶ್ರೀನಗರ: ಪೊಲೀಸ್ ಅಧಿಕಾರಿಯೊಬ್ಬರ ಮನೆಗೆ ಉಗ್ರರು ನುಗ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಮೃತಪಟ್ಟ ಪೊಲೀಸ್ ಅಧಿಕಾರಿಯನ್ನು ಫಾರೂಕ್ ಅಹ್ಮದ್ ಮಿರ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಪಂಪೋರ್ ಪ್ರದೇಶದ ಸಂಬೂರಾದಲ್ಲಿ ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಮನೆ ಮೇಲೆ ದಾಳಿ ನಡೆದಿದ್ದು ಈ ವೇಳೆ ಅವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಸಿಟಿಸಿ ಲೆತ್‍ಪೋರಾದ ಐಆರ್‌ಪಿ 23ನೇ ಬೆಟಾಲಿಯನ್‍ನಲ್ಲಿ ಫಾರೂಕ್ ಅಹ್ಮದ್‍ರನ್ನು ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp