ಸುಭಾಷ್ ಚಂದ್ರ ಬೋಸ್ ಮೊಮ್ಮಗ ಚಂದ್ರಬೋಸ್ BJPಗೆ ರಾಜೀನಾಮೆ

Prasthutha|

ದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರಬೋಸ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

- Advertisement -

ಬಿಜೆಪಿ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಹೇಳಿದ್ದಾರೆ.

ಚಂದ್ರಬೋಸ್ ಅವರು 2016ರಲ್ಲಿ ಬಿಜೆಪಿ ಸೇರಿದ್ದರು ಮತ್ತು 2016ರ ವಿಧಾನಸಭೆ ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಎರಡು ಬಾರಿ ಸ್ಪರ್ಧಿಸಿದ್ದರು. ನಾನು ಬಿಜೆಪಿಗೆ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಶರತ್ ಚಂದ್ರ ಬೋಸ್ ಅವರನ್ನು ಒಳಗೊಳ್ಳುವ ಸಿದ್ಧಾಂತವನ್ನು ಪ್ರಚಾರ ಮಾಡಲು ನನಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ ಈ ಬಗ್ಗೆ ಪಕ್ಷದ ನಾಯಕರು ಯಾವುದೇ ರೀತಿಯ ಬೆಂಬಲವನ್ನು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

- Advertisement -

ಬಿಜೆಪಿ ವೇದಿಕೆಯಲ್ಲಿ ದೇಶ, ಧರ್ಮ, ಜಾತಿ ಮತ್ತು ಪಂಥದ ಭೇದವಿಲ್ಲದೆ ಎಲ್ಲಾ ಸಮುದಾಯಗಳನ್ನು ಭಾರತೀಯರಾಗಿ ಒಗ್ಗೂಡಿಸುವ ನೇತಾಜ್ ಅವರ ಸಿದ್ಧಾಂತವನ್ನು ಪ್ರಚಾರ ಮಾಡುವ ಪ್ರಾಥಮಿಕ ಉದ್ದೇಶದೊಂದಿಗೆ ಬಿಜೆಪಿಯ ಚೌಕಟ್ಟಿನೊಳಗೆ ಆಜಾದ್ ಹಿಂದ್ ಮೋರ್ಚಾವನ್ನು ರಚಿಸಲು ನಿರ್ಧರಿಸಲಾಯಿತು. ಆದರೆ ನನಗೆ ಈ ಯಾವುದಕ್ಕೂ ಅವಕಾಶಗಳನ್ನು ಬಿಜೆಪಿ ಸರಿಯಾಗಿ ನೀಡಿಲ್ಲ ಮತ್ತು ಬೆಂಬಲವನ್ನು ಕೊಟ್ಟಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp