ಟೈಟಾನಿಕ್ ಅವಶೇಷ ನೋಡಲು ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜಲಾಂತರ್ಗಾಮಿ ನಾಪತ್ತೆ!

Prasthutha|

ವಾಷಿಂಗ್ಟನ್: ಟೈಟಾನಿಕ್ ಅವಶೇಷಗಳನ್ನು ನೋಡಲು ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದ ಸಣ್ಣ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ ಎಂದು ವರದಿಯಾಗಿದೆ.

- Advertisement -

ಅಮೆರಿಕದ ಕರಾವಳಿ ಕಾವಲು ಪಡೆ ಈ ಬಗ್ಗೆ ಮಾಹಿತಿ ನೀಡಿದೆ. ಈ ಜಲಾಂತರ್ಗಾಮಿ ಒಂದು ಬಾರಿ 5 ಜನರನ್ನು ಹೊತ್ತೊಯ್ಯಬಹುದು ಎನ್ನಲಾಗಿದ್ದು ಟೈಟಾನಿಕ್ ಹಡಗು ದುರಂತದ ಅವಶೇಷಗಳನ್ನು ವೀಕ್ಷಿಸುವ ಪೂರ್ಣ ಡೈವ್ ಸುಮಾರು 8 ಗಂಟೆಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿದೆ.

ನಾಪತ್ತೆಯಾಗಿರುವ ಜಲಾಂತರ್ಗಾಮಿಯಲ್ಲಿ ಓಷನ್‌ಗೇಟ್ ಎಕ್ಸ್‌ಪೆಡಿಶನ್ಸ್ ಕಂಪನಿಗೆ ಸೇರಿದ್ದು, ಅದರಲ್ಲಿ ಎಷ್ಟು ಜನರಿದ್ದರು ಎಂಬುದು ಇನ್ನು ಕೂಡಾ ಸ್ಪಷ್ಟವಾಗಿಲ್ಲ. ಸಿಬ್ಬಂದಿ ಸೇರಿ ಅದರಲ್ಲಿದ್ದ ಎಲ್ಲಾ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ.

- Advertisement -

ದೈತ್ಯ ಟೈಟಾನಿಕ್ ಹಡಗು 1912ರಲ್ಲಿ ತನ್ನ ಮೊದಲ ಪ್ರಯಾಣದಲ್ಲೇ ಮಂಜುಗಡ್ಡೆಗೆ ಡಿಕ್ಕಿ ಹೊಡೆದು ಅಟ್ಲಾಂಟಿಕ್ ಸಾಗರದಲ್ಲಿ ಮುಳುಗಿತು. ಈ ದುರಂತದಲ್ಲಿ 1,500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಈ ಹಡಗಿನ ಅವಶೇಷವನ್ನು 1985ರಲ್ಲಿ ಕಂಡುಹಿಡಿಯಲಾಯಿತು. ಅಟ್ಲಾಂಟಿಕ್‌ನ ಆಳದಲ್ಲಿರುವ ಈ ಅವಶೇಷವನ್ನು ಅಂದಿನಿಂದ ಇಂದಿನವರೆಗೂ ವ್ಯಾಪಕವಾಗಿ ಪರಿಶೋಧಿಸಲಾಗುತ್ತಿದೆ.