ಹೊಸದಿಲ್ಲಿ: ತನ್ನ ಆದೇಶವನ್ನು ಪಾಲಿಸದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಚುನಾವಣಾ ಬಾಂಡ್ ಗಳ ವಿವರಗಳನ್ನು ಬಹಿರಂಗಪಡಿಸಲು ಜೂನ್ 30 ರವರೆಗೆ ವಿಸ್ತರಣೆ ಕೋರಿ ಎಸ್ ಬಿಐ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾರ್ಚ್ 11) ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ನಾಳೆಯೊಳಗೆ (ಮಾರ್ಚ್ 12, 2024 ರ ವ್ಯವಹಾರದ ಸಮಯದೊಳಗೆ) ವಿವರಗಳನ್ನು ಬಹಿರಂಗಪಡಿಸಲು ಎಸ್ ಬಿಐಗೆ ನಿರ್ದೇಶಿಸಿದೆ.