ಹೆಲಿಕಾಪ್ಟರ್ ದುರಂತ : ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಗೆ ಸುಬ್ರಮಣಿಯನ್ ಸ್ವಾಮಿ ಒತ್ತಾಯ

Prasthutha|

ಉಡುಪಿ: ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೂಲಕ ತನಿಖೆಗೆ ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ. ಎಲ್ಲಾ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯಲ್ಲಿ ಈ ದುರಂತದ ಬಗ್ಗೆ ತನಿಖೆಯಾಗಬೇಕು ಎಂದು ಅವರು ಹೇಳಿದ್ದಾರೆ.

- Advertisement -

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮಿ, ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಸಾಧ್ಯವಿಲ್ಲ, ಹಿರಿಯ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಯನ್ನು ನಡೆಸಬೇಕು, ಈ ಬಗ್ಗೆ ಪ್ರಧಾನಿಗಳು ಜನಸಾಮಾನ್ಯರಿಗೆ ಸತ್ಯಾಂಶ ತಿಳಿಸಿ, ಸೂಕ್ತ ಮಾಹಿತಿ ನೀಡಬೇಕು ಎಂದರು.

ಊಟಿ ಬಳಿಯ ಕೂನೂರಿನ ಸಮೀಪ ಬಿಪಿನ್ ರಾವತ್ ದಂಪತಿ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದ Mi-17V5 ಸೇನಾ ಹೆಲಿಕಾಪ್ಟರ್‌ ಹವಾಮಾನ ವೈಪರೀತ್ಯದಿಂದಾಗಿ ಪತನಗೊಂಡಿದೆ. ಈ ದುರಂತದಲ್ಲಿ 13 ಮಂದಿ ಮೃತಪಟ್ಟಿದ್ದು, ಓರ್ವ ಯೋಧ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp