Home ಕರಾವಳಿ ಸುಬ್ರಹ್ಮಣ್ಯ: ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ

ಸುಬ್ರಹ್ಮಣ್ಯ: ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ

ಸುಬ್ರಹ್ಮಣ್ಯ: ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.

ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಕಾರು ಹರಿದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ವಲ್ಲೀಶ ಸಭಾಭವನದ ಬಳಿ ಕಾಲೇಜು ವಿದ್ಯಾರ್ಥಿನಿಯರು ಕಾಲೇಜು ಬಿಟ್ಟು ಮನೆಗೆ ತೆರಳುತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಮೂವರು ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಕಾರನ್ನು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ವರದಿಯಾಗಿದೆ.

Join Whatsapp
Exit mobile version