Home ಟಾಪ್ ಸುದ್ದಿಗಳು ನೇಣು ಬಿಗಿದುಕೊಂಡು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

ನೇಣು ಬಿಗಿದುಕೊಂಡು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಕಲಬುರಗಿ: ನೇಣು ಬಿಗಿದುಕೊಂಡು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಡಿಎಆರ್ ಹೆಡ್ ಕ್ವಾರ್ಟರ್ಸ್​ ನಲ್ಲಿ ನಡೆದಿದೆ.

ಪಾಂಡುರಂಗ (47) ಆತ್ಮಹತ್ಯೆ ಮಾಡಿಕೊಂಡವರು.

ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಮ್ಮನಚೋಡ್ ಗ್ರಾಮದ ನಿವಾಸಿ ಪಾಂಡುರಂಗ ಅವರು ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ(ಮೇ.20) ರಾತ್ರಿ 10 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ನಸುಕಿನ ಜಾವ ಮನೆಯ ಅಡುಗೆ ಕೊಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version