Home ಜಾಲತಾಣದಿಂದ ಬೆಂಗಳೂರಿನಲ್ಲಿ ಏಕಾಏಕಿ ಗಾಳಿ, ಕೆಲವೆಡೆ ಆಲಿಕಲ್ಲು ಮಳೆ

ಬೆಂಗಳೂರಿನಲ್ಲಿ ಏಕಾಏಕಿ ಗಾಳಿ, ಕೆಲವೆಡೆ ಆಲಿಕಲ್ಲು ಮಳೆ

ಬೆಂಗಳೂರು: ಬೆಂಗಳೂರಿನ ಹಲವೆಡೆ ಕಗ್ಗತ್ತಲ ಮೋಡ ಆವರಿಸಿದ ಕ್ಷಣಾರ್ಧದಲ್ಲೇ ಗಾಳಿ ಮಳೆ ಆರಂಭವಾಗಿದೆ. ಇನ್ನು ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.

ಏಕಾಏಕಿಯಾಗಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ನಡೆಸಿದರು.

ನಗರದ ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಮಲ್ಲೇಶ್ವರಂ, ನಾಗರಬಾವಿ, ಕಾಮಾಕ್ಷಿಪಾಳ್ಯ, ಗಿರಿನಗರ, ಜಯನಗರ, ವಿಜಯನಗರ, ಮಲ್ಲೇಶ್ವರಂ, ಯಶವಂತಪುರ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಜೆ.ಪಿ.ನಗರ, ನಂದಿನಿ ಲೇಔಟ್, ರಾಜಾಜಿನಗರ ಸುತ್ತಮುತ್ತ ಮಳೆಯಾಗಿದೆ.

Join Whatsapp
Exit mobile version