ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಸುಧಾಕರ್ ಅವರಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಕಾಂಗ್ರೆಸ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಕಾಂಗ್ರೆಸ್ ಸುಧಾಕರ್ ಗೆ ರಾಜಕೀಯ ಜನ್ಮ ಕೊಟ್ಟಿದೆ. 2013ರಲ್ಲಿ ಅಂಜನಪ್ಪ ಅವರಿಗೆ ಟಿಕೇಟ್ ನೀಡುವಂತೆ ವೀರಪ್ಪ ಮೊಯ್ಲಿ ಅವರು ಹೇಳಿದರು, ಆದರೆ ನಾನು ಮತ್ತು ಪರಮೇಶ್ವರ್ ಅವರು ಸುಧಾಕರ್ ಅವರಿಗೆ ಟಿಕೇಟ್ ನೀಡಿ ಇಂದು ಪಶ್ಚಾತ್ತಾಪ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
2013ರಲ್ಲಿ, 2018ರಲ್ಲಿ ಸುಧಾಕರ್ ಶಾಸಕರಾಗಿ ನಮ್ಮ ಜೊತೆ ಇದ್ದರು. ನಂತರ ದುರಾಸೆಗೆ ಒಳಗಾಗಿ ಪಕ್ಷ ಬಿಟ್ಟು ಬಿಜೆಪಿ ಸೇರಿದರು ಎಂದು ವಾಗ್ದಾಳಿ ನಡೆಸಿದ್ದಾರೆ.