ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಮಾನನಷ್ಟ ಮೊಕದ್ದಮೆ

Prasthutha|

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಸುಧಾಕರ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ.

- Advertisement -


ಸಾರ್ವಜನಿಕವಾಗಿ ಮಾನಹಾನಿ ಮಾಡುವ ರೀತಿಯಲ್ಲಿ ಮಾತನಾಡೋದು, ಸೋಶಿಯಲ್ ಮೀಡಿಯಾದಲ್ಲಿ ಹಾಗೂ ಮಾಧ್ಯಮಗಳ ಸಂದರ್ಶನದಲ್ಲಿ ಮಾನಹಾನಿ ರೀತಿ ಮಾತನಾಡುತ್ತಿದ್ದಾರೆ. ಈ ಮೂಲಕ ಘನತೆಗೆ ತೇಜೋವಧೆ ಮಾಡುತ್ತಾ ಇದ್ದಾರೆ. ಹೀಗಾಗಿ ಪ್ರದೀಪ್ ಈಶ್ವರ್ ವಿರುದ್ಧ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಅಲ್ಲದೆ ತನ್ನ ವಿರುದ್ಧ ಮಾತನಾಡದಂತೆ ನಿರ್ಬಂಧ ಹೇರಲು ಸುಧಾಕರ್ ಮನವಿ ಮಾಡಿದ್ದಾರೆ.


ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆ. ಸುಧಾಕರ್ ಅವರನ್ನು ಮಣಿಸಿ ಪ್ರದೀಪ್ ಈಶ್ವರ್ ಶಾಸಕರಾಗಿದ್ದಾರೆ.