ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ಸರ್ಕಾರಿ ಕಚೇರಿ ದುರುಪಯೋಗ: ಸುಧೀರ್ ಕುಮಾರ್ ಮುರೊಳ್ಳಿ ಗಂಭೀರ ಆರೋಪ

ಕೊಪ್ಪ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಅವರು ತಮ್ಮ ಸರ್ಕಾರಿ ಕಚೇರಿಯನ್ನು ದುರುಪಯೋಗಪಡಿಸಿದ್ದು, ಬಿಜೆಪಿಯ ಕಾರ್ಯಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಂಬಳ ಕೊಡಲಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಗಂಭೀರ ಆರೋಪ ಮಾಡಿದ್ದಾರೆ.

ಕೊಪ್ಪ ತಾಲ್ಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನು ಜೀವರಾಜ್ ಅವರು ಸರ್ಕಾರಿ ಹುದ್ದೆ ಕೊಟ್ಟು ಮುಖ್ಯಮಂತ್ರಿಗಳ ಕಚೇರಿಯಿಂದ ಸಂಬಳವನ್ನು ಕೊಡಿಸಿದ್ದು ದಾಖಲೆಗಳಲ್ಲಿದೆ. ಆ ಮೂಲಕ ತಮ್ಮ ಕಚೇರಿ ಸಿಬ್ಬಂದಿಯನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

- Advertisement -

ಇದಲ್ಲದೆ, ಗ್ರಾಮ ಪಂಚಾಯಿತಿ ಸದಸ್ಯರನ್ನೂ ಸಹ ತಮ್ಮ ಕಚೇರಿ ಸಿಬ್ಬಂದಿ ಎಂಬಂತೆ ತೋರಿಸಿ ಅವರಿಗೂ ಸಹ ಮುಖ್ಯಮಂತ್ರಿ ಕಚೇರಿಯಿಂದ ಸಂಬಳ ಸಿಗುವಂತೆ ಮಾಡಿದ್ದಾರೆ. ಜೀವರಾಜ್ ಅವರು ಶಾಸಕಾಂಗ ಮತ್ತು ಕಾರ್ಯಾಂಗ ಮತ್ತು ಬಿಜೆಪಿ ಪಕ್ಷ ಈ ಮೂರನ್ನೂ ಒಂದೇ ತಕ್ಕಡಿಯಲ್ಲಿ ಇಟ್ಟು ತೂಗುವಂತೆ ಮಾಡಿದ ಅಪರೂಪದ ವ್ಯಕ್ತಿ ಎಂದು ಸುಧೀರ್ ಕುಮಾರ್ ವ್ಯಂಗ್ಯವಾಡಿದ್ದಾರೆ.