Home ಟಾಪ್ ಸುದ್ದಿಗಳು ಗಾಝಾ ಸಂಘರ್ಷದಿಂದ ಸಂಕಷ್ಟ: ವಿಶ್ವಸಂಸ್ಥೆಯಲ್ಲಿ ಭಾರತದ ಕಳವಳ

ಗಾಝಾ ಸಂಘರ್ಷದಿಂದ ಸಂಕಷ್ಟ: ವಿಶ್ವಸಂಸ್ಥೆಯಲ್ಲಿ ಭಾರತದ ಕಳವಳ

ವಿಶ್ವಸಂಸ್ಥೆ: ಕಳೆದ ಐದು ತಿಂಗಳಿಂದ ಗಾಝಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಭಾರತೀಯರಿಗೂ ತೀವ್ರ ಸಂಕಷ್ಟವಾಗಿದೆ ಎಂದು ವಿಶ್ವಸಂಸ್ಥೆಯಲ್ಲಿರುವ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಕಳವಳ ವ್ಯಕ್ತಪಡಿಸಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವೀಟೊ ಬಳಕೆ ಕುರಿತು ಮಾತನಾಡಿದ ಅವರು, ಈ ಸಂಘರ್ಷದಿಂದ ಹಲವು ನಾಗರಿಕರ ಸಾವು-ನೋವುಗಳು ಸಂಭವಿಸುತ್ತಿವೆ. ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದೆ.ಇದು ಸ್ವೀಕಾರಾರ್ಹವಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷವು ವಿಶೇಷವಾಗಿ ಮಕ್ಕಳು, ಮಹಿಳೆಯರು ಸೇರಿದಂತೆ ನಾಗರಿಕರ ಸಾವುಗಳಿಗೆ ಕಾರಣವಾಗಿದೆ. ಈ ಮಾನವೀಯ ಬಿಕ್ಕಟ್ಟು ಆತಂಕ ಮೂಡಿಸಿದೆ ಎಂದು ಅವರು ಹೇಳಿದರು.

ಗಾಝಾದಲ್ಲಿ ಮಾನವೀಯ ದೃಷ್ಟಿಯಿಂದ ಕದನ ವಿರಾಮಕ್ಕೆ ಕರೆ ನೀಡುವ ನಿರ್ಣಯ ಅಂಗೀಕಾರಕ್ಕೆ ಭದ್ರತಾ ಮಂಡಳಿಯಲ್ಲಿ ಕಳೆದ ತಿಂಗಳು ಅಮೆರಿಕ ವೀಟೊ ಅಧಿಕಾರ ಚಲಾಯಿಸಿ ತಡೆ ನೀಡಿತ್ತು.ಈ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವನ್ನು ಸ್ಪಷ್ಟಪಡಿಸಿದ ಕಾಂಬೋಜ್ ಸಂಘರ್ಷದಲ್ಲಿ ನಾಗರಿಕರ ಸಾವನ್ನು ಭಾರತ ಬಲವಾಗಿ ಖಂಡಿಸುತ್ತದೆ ಎಂದರು.

Join Whatsapp
Exit mobile version