ಶಿಮ್ಲಾ: ರಾಜ್ಯಸಭಾ ಚುನಾವಣೆಯಲ್ಲಿ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿನ ಹೊಣೆಯನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ ಹೊತ್ತುಕೊಂಡಿದ್ದಾರೆ, ಎಲ್ಲಾ ಕಾಂಗ್ರೆಸದ ಶಾಸಕರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ನಂತರ ಎಲ್ಲಾ ಭಿನ್ನಾಭಿಪ್ರಾಯಗಳು ಬಗೆಹರಿದಿವೆ ಎಂದು ಕಾಂಗ್ರೆಸ್ ಕೇಂದ್ರ ವೀಕ್ಷಕರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ಇತರ ವೀಕ್ಷಕರಾದ ಭೂಪೇಂದರ್ ಹೂಡಾ ಅವರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಇರುತ್ತದೆ. ಸುಖ್ ಸಿಎಂ ಆಗಿ ಮುಂದುವರಿಯುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಹೂಡಾ, “ಸುಖ್ ಸಿಎಂ ಆಗಿರುವಾಗ ಏಕೆ ಕಾಲ್ಪನಿಕ ಪ್ರಶ್ನೆ ಕೇಳುತ್ತಿದ್ದೀರಿ? ಎಂದರು.
ಕೇಂದ್ರ ವೀಕ್ಷಕರು ಸುಖ್, ಪಕ್ಷದ ಶಾಸಕರು ಮತ್ತು ರಾಜ್ಯ ಘಟಕದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಭಿನ್ನಾಭಿಪ್ರಾಯಗಳನ್ನು ನಿವಾರಿಸಲಾಗಿದೆ. ಎಲ್ಲಾ ಆಂತರಿಕ ವಿಷಯಗಳನ್ನು ಬಗೆಹರಿಸಲು ಸಮನ್ವಯ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಶಿವಕುಮಾರ್ ಹೇಳಿದರು.