ಸುಖಜಿಂದರ್ ಸಿಂಗ್ ರಾಂಧವ ಪಂಜಾಬ್ ನ ನೂತನ ಮುಖ್ಯಮಂತ್ರಿ ಆಗುವ ಸಾಧ್ಯತೆ!

Prasthutha|

ಚಂಡೀಗಡ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಕ್ಯಾಪ್ಟನ್ ಅಮರೀಂದರ್ ಅವರ ಸಂಪುಟದಲ್ಲಿ ಸಚಿವರಾಗಿದ್ದ ಸುಖಜಿಂದರ್ ಸಿಂಗ್ ರಾಂಧವ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

- Advertisement -

ಅಮರೀಂದರ್ ಸಿಂಗ್ ಅವರ ಕ್ಯಾಬಿನೆಟ್ ನಲ್ಲಿ ಬಂಧಿಖಾನೆ ಮತ್ತು ಸಹಕಾರ ಸಚಿವರಾಗಿದ್ದ ರಾಂಧವ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಹುದ್ದೆಯ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ ಮತ್ತು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಸಕ್ತ ಪಂಜಾಬ್ ನಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಹುದ್ದೆಗೆ ರಾಂಧವ ಅವರ ಹೆಸರು ಈ ಹಿಂದಿನಿಂದಲೂ ಚಾಲ್ತಿಯಲ್ಲಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಹೇಳಿ ನುಣುಚಿಕೊಳ್ಳುತ್ತಿದ್ದರು.

- Advertisement -

ಸುದ್ದಿಗಾರರು ಅವರೊಂದಿಗೆ ಮಾತನಾಡುತ್ತ ನಾವು ಭವಿಷ್ಯದ ಮುಖ್ಯಮಂತ್ರಿಯೊಂದಿಗೆ ಮಾತನಾಡುತ್ತಿದ್ದೇವೆ ಎಂದು ಊಹಿಸಬಹುದೇ? ಎಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕ ರಾಂಧವ, ನೀವು ಕಾಂಗ್ರೆಸ್ಸಿಗನೊಂದಿಗೆ ಮಾತನಾಡುತ್ತಿದ್ದೀರಿ ಎಂದು ವ್ಯಂಗ್ಯ ಪ್ರತಿಕ್ರಿಯೆಯ ಮೂಲಕ ಮಾಧ್ಯಮದವರಿಂದ ನುಣುಚಿಕೊಂಡರು.

ಒಟ್ಟಾರೆಯಾಗಿ ಪಂಜಾಬ್ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಮೂಲಕ ಈ ಎಲ್ಲಾ ವಿವಾದಕ್ಕೆ ತೆರೆ ಎಳೆಯುವ ಸಾಧ್ಯತೆಯಿದೆ.

Join Whatsapp