ಹಿಮಾಚಲ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್ ಸುಖು

Prasthutha|

ಶಿಮ್ಲಾ: ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖವೀರ್ ಸಿಂಗ್ ಸುಖು ಹಾಗೂ ಉಪ ಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ  ಅವರನ್ನು ಆಯ್ಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಛತ್ತೀಸ್’ಗಡ ಮುಖ್ಯಮಂತ್ರಿ ಭೂಪೇಶ್ ಭಗೇಲ್ ತಿಳಿಸಿದರು.

- Advertisement -

ಸುಖವಿಂದರ್ ಸಿಂಗ್ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಘೋಷಣೆಯಾಗುತ್ತಲೇ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆಯೂ ಆಗಿರುವ ಪ್ರತಿಭಾ ಸಿಂಗ್ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -



Join Whatsapp