Home ಕರಾವಳಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಆಸ್ಪತ್ರೆಯಿಂದ ಬಿಡುಗಡೆ

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪದ್ಮಶ್ರೀ ಪುರಸ್ಕೃತೆ, ಉತ್ತರ ಕನ್ನಡ ಜಿಲ್ಲೆಯ ಸುಕ್ರಿ ಬೊಮ್ಮನ ಗೌಡ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ಮಂಗಳವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ಭೇಟಿ ನೀಡಿ ಸುಕ್ರಿ ಬೊಮ್ಮಗೌಡರ ಆರೋಗ್ಯ ವಿಚಾರಿಸಿದ್ದರು. ಸುಕ್ರಿ ಬೊಮ್ಮನಗೌಡರ ಚಿಕಿತ್ಸೆಯ ಸಂಪೂರ್ಣ ಖರ್ಚು ವೆಚ್ಚವನ್ನು ಸರಕಾರದಿಂದ ಭರಿಸುವಂತೆ ಹಾಗೂ ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚಿಸಿದ್ದರು. .

Join Whatsapp
Exit mobile version