ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ ಸಿಕ್ಕಿದೆ.
ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಏಕ ಸದಸ್ಯ ಪೀಠದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಪೀಠವು ಎಫ್ ಐಆರ್ ಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
‘ಅಯೋಗ್ಯ’ ಎನ್ನುವ ಹೇಳಿಕೆ ಯಾವ ಜಾತಿಗೂ ಅನ್ವಯವಾಗುದಿಲ್ಲ. ಅಷ್ಟೇ ಅಲ್ಲದೆ, ಯಾರ ಜಾತಿ ನಿಂದನೆ ಆಗಿದೆಯೋ ಅವರು ದೂರು ನೀಡಿಲ್ಲ. ರಾಜಕೀಯ ಪಕ್ಷದ ಜಿಲ್ಲಾಧ್ಯಕ್ಷರು ದೂರು ನೀಡಿದ್ದಾರೆ. ನೀವು ಯಾವ ಉದ್ದೇಶ ಇಟ್ಟುಕೊಂಡು ದೂರು ನೀಡಿದ್ದಿರಿ ಅನ್ನೋದು ಗೋತ್ತಾಗುತ್ತದೆ ಎಂದು ನ್ಯಾಪೀಠ ದೂರುದಾರರನ್ನೇ ತರಾಟೆಗೆ ತೆಗೆದುಕೊಂಡಿದೆ.