Home ಟಾಪ್ ಸುದ್ದಿಗಳು ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಪ್ರಕರಣ: ಸೂಲಿಬೆಲೆಗೆ ಜಾಮೀನು

ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಪ್ರಕರಣ: ಸೂಲಿಬೆಲೆಗೆ ಜಾಮೀನು

ರಾಯಚೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ‌ ಅಪಮಾನಕರ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಂತೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದ ಹಿನ್ನೆಲೆ ರಾಯಚೂರಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ನೀಡಲಾಗಿದೆ.

18 ಜನವರಿ 2024 ರಂದು ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು. ಈ ವೇಳೆ ಭಾಷಣದಲ್ಲಿ ಕಲಬುರ್ಗಿ ಇಎಸ್‌ಐ ಆಸ್ಪತ್ರೆ ವಿಚಾರವಾಗಿ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ನೀಡಿದ್ದರು.

Join Whatsapp
Exit mobile version