Home ಕರಾವಳಿ ಸುಳ್ಯ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಸಂಪೂರ್ಣ ನೆಲಸಮ

ಸುಳ್ಯ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಸಂಪೂರ್ಣ ನೆಲಸಮ

ಸುಳ್ಯ: ಭಾರೀ ಮಳೆಯಿಂದಾಗಿ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯೊಂದು ನೆಲಸಮವಾಗಿರುವ ಘಟನೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಕಂಡಿತ್ತು.

ಬಿರುಕು ಬಿಟ್ಟಿದ್ದ ಗೋಡೆ ದುರಸ್ತಿ ಕೆಲಸ ಮಾಡಲಾಗಿದ್ದು, ಜುಲೈ 18ರಂದು ಗೃಹಪ್ರವೇಶ ನೆರವೇರಿಸಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ. ಕಷ್ಟಪಟ್ಟು ಕಟ್ಟಿದ್ದ ಮನೆ ಗೃಹಪ್ರವೇಶಕ್ಕೆ ಮೊದಲೇ ನೆಲಸಮವಾಗಿದ್ದರಿಂದ ಮನೆಯವರು ಕಂಗಾಲಾಗಿದ್ದಾರೆ.

Join Whatsapp
Exit mobile version