ಸುಳ್ಯ: ಇಲ್ಲಿನ ತಾಲ್ಲೂಕಿನ ಬೆಳ್ಳಾರೆಯ ಬಿಜೆಪಿ ಮುಖಂಡ, ಬೆಳ್ಳಾರೆ ಅಕ್ಷಯ ಕೋಳಿ ಅಂಗಡಿಯ ಮಾಲೀಕ ಪ್ರವೀಣ್ ನೆಟ್ಟಾರು(32) ಎಂಬವನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಗೈದಿರುವ ಘಟನೆ ನಡೆದಿದೆ.
ಬೈಕ್ ನಲ್ಲಿ ಬಂದ ತಂಡ ತಲವಾರಿನಿಂದ ಪ್ರವೀಣ್ ಅವರ ತಲೆಗೆ ಕಡಿದು ಪರಾರಿ ಆಗಿದೆ. ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.