ಸುಳ್ಯ | ಆಸ್ತಿ ವಿಚಾರದಲ್ಲಿ ಗಲಾಟೆ: ಸಹೋದರರಿಂದಲೇ ಅಣ್ಣನ ಕೊಲೆ

Prasthutha|

ಸುಳ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಂತ ತಮ್ಮಂದಿರೇ ಅಣ್ಣನನ್ನು ಕೊಚ್ಚಿ ಕೊಲೆಗೈದ ಘಟನೆ ಸಂಪಾಜೆ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ.

- Advertisement -


ಕೊಲೆಯಾದ ವ್ಯಕ್ತಿಯನ್ನು ಕುದ್ರೆಪಾಯ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ.


ಸತ್ತಾರ್, ರಫೀಕ್, ಇಸುಬು, ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವಿತ್ತು. ಜಾಗದ ತಕರಾರಿನಿಂದಾಗಿ ಸಹೋದರರು ಸೇರಿ ಉಸ್ಮಾನ್ ರನ್ನು ಇಂದು ಚೂರಿಯಿಂದ ಇರಿದು ಕೊಂದಿದ್ದಾರೆ ಎಂದು ತಿಳಿದು ಬಂದಿದೆ.

- Advertisement -


ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Join Whatsapp
Exit mobile version