ಸುಳ್ಯ: ಗುಂಡಿ ತೆಗೆಯುವಾಗ ಗುಹೆ, ಪ್ರಾಚೀನ ಪರಿಕರಗಳು ಪತ್ತೆ !

Prasthutha|

ಸುಳ್ಯ: ಜಮೀನಿನಲ್ಲಿ ಗುಂಡಿ ತೆಗೆಯುವಾಗ ಗುಹೆ ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ.

- Advertisement -


ರಬ್ಬರ್ ತೋಟ ತೆರವು ಮಾಡಿ ಅಡಕೆ ತೋಟ ಮಾಡುವ ಉದ್ದೇಶದಿಂದ ಜೆಸಿಬಿ ಯಂತ್ರದ ಮೂಲಕ ಅಡಕೆ ಗುಂಡಿ ತೆಗೆಯುವಾಗ ಇವು ಕಾಣಿಸಿಕೊಂಡಿದೆ.


ಗುಹೆಯಲ್ಲಿ ಮಣ್ಣಿನ ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷಗಳು ಪತ್ತೆಯಾಗಿದೆ.
ಇನ್ನು ಇದನ್ನು ಉದ್ದೇಶಪೂರ್ವಕವಾಗಿ ಸಣ್ಣ ಮಾದರಿಯ ಗುಹೆ ತೋಡಿ ಪರಿಕರಗಳನ್ನು ಇದರಲ್ಲಿ ಹೂತು ಮುಚ್ಚಿರಬಹುದು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.



Join Whatsapp