ಸುಳ್ಯ: ಎರಡು ದಿನಗಳಿಂದ ಎಡೆಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗಗಳಲ್ಲಿ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಚೆಂಬು ಗ್ರಾಮದ ಮಾರ್ಪಡ್ಕ ಎಂಬಲ್ಲಿ ಮೋರಿಯೊಂದು ಕುಸಿದಿದ್ದು ಇದರಿಂದ ಊರುಬೈಲು, ಬಾಲೆಂಬಿ, ಸಂಪಾಜೆ ನಡುವಿನ ಸಂಪರ್ಕ ಕಡಿತವಾಗಿದೆ. ಜನ ಸಂಚಾರಕ್ಕೆ ತೊಂದರೆಯುಂಟಾಗಿದೆ.