ಸುಳ್ಯ: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಸಂದೀಪ್ ಎಂಬಾತ ನಡುಬೀದಿಯಲ್ಲಿ ತಲವಾರು ಹಿಡಿದುಕೊಂಡು ಸುತ್ತಾಡುತ್ತಿದ್ದು ಸಾರ್ವಜನಿಕರಿಗೆ ಭಯದ ವಾತಾವರಣ ಉಂಟಾಗಿದೆ.
ಜಾಲ್ಸೂರಿನ ಕನಕಮಜಲು ಎಂಬಲ್ಲಿ ಈತ ಹಾಡಹಗಲೇ ಮಾರಕಾಸ್ತ್ರ ಹಿಡಿದು ರಾಜಾರೋಷವಾಗಿ ಸುತ್ತಾಡುತ್ತಿದ್ದು ಸಾರ್ವಜನಿಕರಿಗೆ ಬೆದರಿಕೆಯಾಗಿದ್ದಾನೆ. ಆದ್ದರಿಂದ ಪೊಲೀಸರು ದುಷ್ಕರ್ಮಿಯ ವಿರುದ್ಧ ಸ್ವಯಂ ಪ್ರೇರಿತ ಕೇಸು ದಾಖಲಿಸಿ ಸಮಾಜದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.