ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

Prasthutha|

ಸುಳ್ಯ: ಜಮೀನಿಗೆ ಸಂಬಂಧಿಸಿದಂತೆ ಕಡತ ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಸಂಪಾಜೆ- ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.

- Advertisement -


ಅರಂತೋಡು ಗ್ರಾಮ ಕರಣಿಕ ಮಿಯಾಸಾಬ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.


ಅರಂತೋಡು ನಿವಾಸಿ ಹರಿಪ್ರಸಾದ್ ಅವರು ಆಸ್ತಿ ಹಕ್ಕಿಗೆ ಸಂಬಂಧಿಸಿದ ಕಡತ ವಿಲೇವಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭ ಲೆಕ್ಕಾಧಿಕಾರಿ ಮಿಯಾಸಾಬ್ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಹರಿಪ್ರಸಾದ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಶನಿವಾರ ಸುಳ್ಯ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಹರಿಪ್ರಸಾದ್ ಅವರಿಂದ ಲಂಚ ಸ್ವೀಕರಿಸುವ ವೇಳೆ ಮಿಯಾಸಾಬ್ ರೆಡ್ ಹ್ಯಾಂಡಾಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

Join Whatsapp