Home ಕರಾವಳಿ ಸುಳ್ಯ| ವಿವಾಹಿತೆ ಆತ್ಮಹತ್ಯೆಗೆ ಶರಣು

ಸುಳ್ಯ| ವಿವಾಹಿತೆ ಆತ್ಮಹತ್ಯೆಗೆ ಶರಣು

ಸುಳ್ಯ: ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ಗುರುವಾರ ನಡೆದಿದೆ.

ಮಲ್ಲಿಕಾ (26) ಮೃತಪಟ್ಟ ಯುವತಿ. ಶರತ್ ಎಂಬವರ ಪತ್ನಿ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ಗಣರಾಜ್ಯೋತ್ಸವದ ಹಿನ್ನಲೆ ಮಲ್ಲಿಕಾ ರಜೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣಗಳು ತಿಳಿದು ಬಂದಿಲ್ಲ.

Join Whatsapp
Exit mobile version