ಸುಳ್ಯ: ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾದ ಮೂಲಕ ಪ್ರತಿಭಟನೆ ನಡೆಯಿತು.
ನಿಂತಿಕಲ್ಲಿನಿಂದ ಸುಳ್ಯದವರೆಗೆ ಸುಮಾರು 22 ಕಿ.ಮೀವರೆಗೆ ಕಾಲ್ನಡಿಗೆ ಸಾಗಿ ಸುಳ್ಯದಲ್ಲಿ ಬೃಹತ್ ಸಭೆ ನಡೆಯಿತು.
ಸೌಜನ್ಯ ತಾಯಿ ಕುಸುಮಾವತಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಿದ್ದರು.
ಬೃಹತ್ ಜಾಥಾದಲ್ಲಿ ಪಕ್ಷ, ಜಾತಿ, ಧರ್ಮ ಮರೆತು ಹೋರಾಟ ನಡೆಸಲಾಗುತ್ತಿದೆ. ಸುಳ್ಯದ ಗೌಡರ ಸಂಘ ಸೇರಿ ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದಾರೆ.
ಇತ್ತೀಚೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪರ ನಡೆದಿದ್ದ ಬೃಹತ್ ಸಮಾವೇಶ ನಡೆಸಲಾಗಿತ್ತು. ಸಮಾವೇಶದಲ್ಲಿ ಸೌಜನ್ಯಳ ತಾಯಿ ಕುಸುಮಾವತಿ ಮೇಲೆ ಹಲ್ಲೆಗೆ ಮುಂದಾದ ಘಟನೆ ನಡೆದಿತ್ತು. ಈ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಹೆಗ್ಗಡೆ ಪರ ಪ್ರತಿಭಟನೆ ಬೆನ್ನಲ್ಲೇ ಸುಳ್ಯದಲ್ಲಿ ಸೌಜನ್ಯ ನ್ಯಾಯಕ್ಕೆ ಬೃಹತ್ ಹೋರಾಟ ನಡೆಸಲಾಗುತ್ತಿದೆ.