ಸುಳ್ಯ: ಬಿಸಿಎಂ ಹಾಸ್ಟೆಲ್’ನಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಇಂದು ನಡೆದಿದೆ.
ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಸೋನಿಯಾ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಸೋನಿಯಾ ಸೋಮವಾರ ಕಾಲೇಜಿಗೆ ಹೋಗದೆ ರೂಮಿನಲ್ಲಿಯೇ ಉಳಿದುಕೊಂಡಿದ್ದಳು. ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಮ್ ಬಳಿ ಬಂದಿದ್ದ ಆಕೆಯ ಗೆಳತಿ ವಾರ್ಡನ್’ಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಹಾಸ್ಟೆಲ್ ಸಿಬ್ಬಂದಿ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.